ಹನೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಅಧ್ಯಕ್ಷೆ ಚಂದ್ರಮ್ಮ, ಮುಖ್ಯಾಧಿಕಾರಿ ಪರಶಿವಯ್ಯ, ಸದಸ್ಯರು, ಕಚೇರಿ ನೌಕರರು ಇದ್ದರು. 
ಜಿಲ್ಲೆ

ರಾಮಾಯಣ ಹಿಂದು ಧರ್ಮದ ಶ್ರೇಷ್ಠ ಗ್ರಂಥ

ಹನೂರು: ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಹಿಂದು ಧರ್ಮದ ಶ್ರೇಷ್ಠ ಗ್ರಂಥವಾಗಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್‌ಕುಮಾರ್ ತಿಳಿಸಿದರು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಾಮಾಯಣದಲ್ಲಿ ಜೀವನದ ನೈತಿಕ ಮೌಲ್ಯಗಳನ್ನು ವಿಸ್ತೃತವಾಗಿ ತಿಳಿಸಿಕೊಟ್ಟಿದ್ದು, ಉತ್ತಮ ಬದುಕಿಗೆ ದಾರಿದೀಪವಾಗಿದೆ. ಹಾಗಾಗಿ ಈ ಗ್ರಂಥ ಹಿಂದು ಧರ್ಮಕ್ಕೆ ಮಾತ್ರವಲ್ಲ ಇಡೀ ಮನುಕುಲವನ್ನು ಮುನ್ನಡೆಸುವಂತಹ ಮೇರುಕೃತಿಯಾಗಿದೆ. ಪ್ರತಿಯೊಬ್ಬರೂ ರಾಮಾಯಣ ಅಭ್ಯಸಿಸುವುದರ ಮೂಲಕ ಮಹರ್ಷಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪಪಂ ಅಧ್ಯಕ್ಷೆ ಚಂದ್ರಮ್ಮ, ಸದಸ್ಯರು, ಮುಖ್ಯಾಧಿಕಾರಿ ಪರಶಿವಯ್ಯ, ಕಚೇರಿ ಸಿಬ್ಬಂದಿ ಹಾಜರಿದ್ದರು.