ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಭೇಟಿಯಾಗಿ ಕ್ಷೇತ್ರದಲ್ಲಿನ ಸಮಸ್ಯೆ ತಿಳಿಸಿ ಸೂಕ್ತ ಪರಿಹಾರ ನೀಡುವಂತೆ ವಿನಂತಿಸಿದರು. 
ಜಿಲ್ಲೆ

ರಾಯಣ್ಣ ಸಮಾಧಿಗೆ ಸಿಎಂ ಭೇಟಿ ಶೀಘ್ರ

ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರ ಭೇಟಿ ನೀಡಲಿದ್ದಾರೆ ಎಂದು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಖಾನಾಪುರ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿ ಮೂಲ ಸೌಕರ್ಯ ಸಮಸ್ಯೆಗಳ ಕುರಿತು ಸಿಎಂ ಗಮನಕ್ಕೆ ತರಲಾಗಿದೆ. ಅಲ್ಲದೆ, ಅತಿವೃಷ್ಟಿಯಿಂದಾದ ಹಾನಿ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದರು. ಮನವಿಗೆ ಸಿಎಂ ಸ್ಪಂದಿಸಿದ್ದು, ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರ ನೀಡಲಾಗುವುದು. ನಂದಗಡದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ
ನೀಡುತ್ತೇನೆ ಎಂದು ಅವರು ಹೇಳಿದ್ದಾಗಿ ಶಾಸಕಿ ಅಂಜಲಿ ತಿಳಿಸಿದ್ದಾರೆ.