ಚಿತ್ರದುರ್ಗ: ಕೋಲಾರದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ 17 ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲೂಕು ಸಿರಿ ಗೆರೆಯ ಬಿ.ಲಿಂಗಯ್ಯ ವಸತಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಎಲ್.ಎಚ್.ಅಭಿ, ಉದ್ದ ಜಿಗಿತ ಸ್ಪರ್ಧೆಯಲ್ಲಿ 6.17ಮೀಟರ್ ಜಿಗಿದು ರಾಜ್ಯಕ್ಕೆ ಪ್ರಥಮ ಹಾಗೂ ಚಿತ್ರದುರ್ಗ ವಿದ್ಯಾವಿಕಾಸ ವಿದ್ಯಾಸಂಸ್ಥೆ 10ನೇ ತರಗತಿ ವಿದ್ಯಾರ್ಥಿ ನೌಮನ್‌ಅಹಮದ್‌ಶರೀಫ್ 400 ಮೀಟರ್ ಹ ರ್ಡಲ್ಸ್ನಲ್ಲಿ(57.91ಸೆಕೆಂಡ್)ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ಲಕ್ನೋದಲ್ಲಿ ನ.26ರಿಂದ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಜಿಲ್ಲೆಗೆ ಕೀರ್ತಿ ತಂದ ಈ ಇಬ್ಬರು ಕ್ರೀಡಾಪಟುಗಳನ್ನು ಡಿಡಿಪಿಐ ಎಂ.ಆರ್.ಮಂಜುನಾಥ್ ಅವರು ತಮ್ಮ ಕಚೇರಿಯಲ್ಲಿ ಮಂಗಳವಾರ ಗೌರವಿಸಿ ದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚನ್ನಬಸಪ್ಪ,ದೈಹಿಕ ಶಿಕ್ಷಣ ಶಿಕ್ಷಕರಾದ ನವೀನ್ ಕುಮಾರ್,ಲಿಂಗರಾಜು ಮತ್ತಿತರರು ಇದ್ದರು.