ಜಿಲ್ಲೆ

ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಚಾಮರಾಜನಗರ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಡಿ.24 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಹಳೆ ಕೆ.ಡಿ.ಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರ ನ್ಯಾಯಕ್ಕಾಗಿ ವರ್ಚುವಲ್ ವಿಚಾರಣೆಗಳು ಮತ್ತು ಡಿಜಿಟಲ್ ಹಾದಿ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಸಮಾರಂಭ ನಡೆಯಲಿದೆ.

ಗ್ರಾಹಕರ ಹಕ್ಕು, ಕರ್ತವ್ಯ, ಶಿಕ್ಷಣ, ಜಾಗೃತಿ ಸೇವೆಗಳ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಗ್ರಾಹಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ಕೋರಿದ್ದಾರೆ.