ಅರಸೀಕೆರೆ: ನಗರದ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎಚ್.ಡಿ.ಉಮೇಶ್ ಮಾತನಾಡಿ, ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕು ಚಲಾವಣೆ ನಮ್ಮೆಲ್ಲರ ಮೊದಲ ಆದ್ಯತೆಯಾಗಬೇಕು. ಚುನಾವಣೆ ವೇಳೆ ಒಡ್ಡುವ ಆಸೆ, ಆಮಿಷಗಳಿಗೆ ಬಲಿಯಾಗದೇ ಉತ್ತಮ ವ್ಯಕ್ತಿಯ ಆಯ್ಕೆಗೆ ಒತ್ತು ನೀಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಲು ಸಾಧ್ಯವಿದೆ. ಜಗತ್ತಿನ ಎಲ್ಲ ದೇಶಗಳಿಗಿಂತ ಅತ್ಯಂತ ಬಲಿಷ್ಠವಾದ ಪ್ರಜಾತಂತ್ರವನ್ನು ಹೊಂದಿದ್ದೇವೆ ಎನ್ನುವುದೇ ಹೆಮ್ಮೆಯ ಸಂಗತಿಯಾಗಿದೆ. ಕತ್ತೆಗೂ ಬೆಲೆಯಿದೆ ಎನ್ನುವ ನಿದರ್ಶನ ಸಹಿತ ಕಡ್ಡಾಯ ಮತದಾನದ ಮಹತ್ವವನ್ನು ಬೋಧನಾ ವಿಧಿ ಮೂಲಕ ಮನವರಿಕೆ ಮಾಡಿಕೊಟ್ಟರು.ಉಪನ್ಯಾಸಕರಾದ ಎನ್.ಬಿ.ರೇವಣ್ಣ, ಅಯೂಬ್, ಮಂಜುನಾಥ್, ಶಶಿಕುಮಾರ್, ನಾಗರತ್ನ,ಜಯಶೀಲ ಸೇರಿ ಉಪನ್ಯಾಸಕರು ಹಾಗೂ ಸಿಬ್ಬಂದಿ ಹಾಜರಿದ್ದರು
.ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಡ್ಡಾಯ ಮತದಾನದ ಮಹತ್ವ ಕುರಿತು ಆಯೋಜಿಸಿದ್ದ ಪ್ರಬಂಧ ಹಾಗೂ ಚರ್ಚಾಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.