ಜಿಲ್ಲೆ

ರಾಷ್ಟ್ರೀಯ ಲೋಕ ಅದಾಲತ್ ಸಹಕಾರಿ

ಬಳ್ಳಾರಿ : ಸಾರ್ವಜನಿಕರು ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಮಾಡಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣವಕಾಶವಾಗಿದೆ ಎಂದು ಸತ್ರ ನ್ಯಾಯಧೀಶೆ ನ್ಯಾ. ಕೆ. ಜಿ ಶಾಂತಿ ಹೇಳಿದರು.
ನಗರದ ನ್ಯಾಯಾಲಯದ ವಿಸಿ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಿನ್ನಲೆ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ 31 ನ್ಯಾಯಾಲಯಗಳಲ್ಲಿನ ಬಾಕಿ ಇರುವ 64,811 ಪ್ರಕರಣಗಳಲ್ಲಿ 12,438 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಹುದು ಎಂದು ಗುರುತಿಸಲಾಗಿತ್ತು. ಅವುಗಳಲ್ಲಿ ಕಕ್ಷಿದಾರರ ಮನವೊಲಿಸಿ 7,568 ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ. ಇಲ್ಲಿಯವರೆಗೂ 2,36,000 ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಶನಿವಾರ ನಡೆದ ರಾಷ್ಟ್ರೀಯ ಲೋಕಾ-ಅದಾಲತ್‌ನಲ್ಲಿ 10 ಸಾವಿರ ಬಾಕಿ ಇರುವ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಆಶಯವಿದ್ದು, ಒಟ್ಟಾರೆಯಾಗಿ 2,60,000 ಪ್ರಕರಣಗಳು ರಾಜಿಯಾಗುವ ಉದ್ದೇಶ ಹೊಂದಲಾಗಿದೆ ಎಂದರು. ಇದೇ ವೇಳೆ ಹಿರಿಯ ಸಿವಿಲ್ ನ್ಯಾ. ರಾಜೇಶ್ ಎನ್. ಹೊಸಮನೆ ಇದ್ದರು.