ಜಿಲ್ಲೆ

ರಾಷ್ಟ್ರೀಯ ಲೋಕ ಅದಾಲತ್ ಸೆ.14ರಂದು

ಕಲಬುರಗಿ: ಜಿಲ್ಲಾದ್ಯಂತ ಸೆ.೧೪ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಎಸ್.ನಾಗಶ್ರೀ ಹೇಳಿದರು.
ರಾಷ್ಟಿçÃಯ ಕಾನೂನು ಸೇವಾ ಪ್ರಾಧಿಕಾರದ ಆದೇಶದಂತೆ ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ೫೦.೮೦೮ ಪ್ರಕರಣಗಳು ಬಾಕಿಯಿವೆ. ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲು ಹಣ ಮತ್ತು ಸಮಯ ಉಳಿಸಬಹುದಾಗಿದೆ. ಇದಕ್ಕೆ ಸಂಬAಧಿಸಿದAತೆ ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು.
ಸೆ.೧೪ರಂದು ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಅದಾಲತ್ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಪೈಕಿ ರಾಜ ಸಂಧಾನದ ಮೂಲದ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಉಭಯ ಪP್ಷÀಗಾರರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳಬಹುದು ಎಂದರು.
ಬಾಕಿ ಇರುವ ಗರಿಷ್ಠ ಪ್ರಮಾಣ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹಾಕಿಕೊಳ್ಳಲಾಗಿದೆ. ಜನತಾ ನ್ಯಾಯಾಲಯಗಳಲ್ಲಿ ನೀಡುವ ತೀರ್ಪು ನ್ಯಾಯಾಲಯದಲ್ಲಿ ಕೊಡುವ ತೀರ್ಪಿನಷ್ಟೇ ಪರಿಣಾಮಕಾರಿಯಾಗಿರುತ್ತವೆ. ಮೇಲ್ಮನವಿ, ಖರ್ಚು ವೆಚ್ಚ ಇರುವುದಿಲ್ಲ. ವಕೀಲರು ಅಥವಾ ಸಂಬAಧಪಟ್ಟವರು ನೇರವಾಗಿ ಪಾಲ್ಗೊಳ್ಳಬಹುದು. ವ್ಯಾಜ್ಯಗಳು ಸೌಹಾರ್ದಯುತವಾಗಿ ಇತ್ಯರ್ಥಗೊಂಡರೆ ಉತ್ತಮ ಬಾಂಧವ್ಯದ ಜತೆಗೆ ನೆಮ್ಮದಿ ದೊರೆಯುತ್ತದೆ ಎಂದು ಹೇಳಿದರು.
ಅದಾಲತ್‌ನಲ್ಲಿ ಸಿವಿಲï ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕ, ವೇತನ ಭತ್ಯೆ, ಕೈಗಾರಿಕಾ ಕಾರ್ಮಿಕ ವೇತನ, ಬ್ಯಾಂಕ್‌ಗಳಿಗೆ ಸಂಬAಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ, ಜಿ¯್ಲÁ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಇದ್ದರು.