ಜಿಲ್ಲೆ

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಪ್ರವಾಸ

ಬಾಗಲಕೋಟೆ: ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಮ್. ವೆಂಕಟೇಶನ್ ಅವರು ಜೂನ್ 15 ಮತ್ತು 16 ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜೂನ್ 15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿಗಳೊಂದಿಗೆ ಸಫಾಯಿ ಕರ್ಮಚಾರಿ ಕಾಲೋನಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯಿರ್ವಾಹಕ ಅಧಿಕಾರಿ, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಫಾಯಿ ಕರ್ಮಚಾರಿಗಳು ಮತ್ತು ಅವರ ಯೂನಿಯನ ಲೀಡರ್ ಗಳೊಂದಿಗೆ ಸಭೆ ನಡೆಸುವರು.

ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರೊಂದಿಗೆ ಸಭೆ ನಡೆಸಲಿದ್ದಾರೆ. 16 ರಂದು ಬೆಳಿಗ್ಗೆ 5 ಗಂಟೆಗೆ ಬಾಗಲಕೋಟೆಯ ರಿಯಲ್ ಸ್ಪೋಟ್ರ್ಸ್ ಅಸೋಸಿಯೇಶನ್ ಏರ್ಪಡಿಸಿರುವ the great bagalkote run mansoon 10 ಕಿ.ಮೀ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ 11ಕ್ಕೆ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.