ಯಾದಗಿರಿ: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ನಿಂದ ನಗರದ ಗಾಂ ವೃತ್ತದಲ್ಲಿನ ಪಂಪ ಮಹಾಕವಿ ಮಂಟಪದ ಬಳಿ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು.
ಇದಕ್ಕೂ ಮುನ್ನ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಬಸರಡ್ಡಿ ಪಾಟೀಲ್ ಅನಪುರ, ರಾಹುಲ್ ಗಾಂಧಿ ಅವರು ಎಂದಿಗೂ ದೇಶದ ಸ್ವಾಭಿಮಾನಕ್ಕೆ ಧಕ್ಕೆ ತಂದಿಲ್ಲ. ರಾಜ್ಯದಲ್ಲಿ ಅವರು ಮಾಡಿದ ಭಾಷಣವನ್ನೇ ಮುಂದಿಟ್ಟುಕೊಂಡು ರಾಜಕೀಯವಾಗಿ ಬಿಜೆಪಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ. ಅದನ್ನು ನಾವು ಖಂಡಿಸುತ್ತೇವೆ. ದೇಶದ ಪರವಾಗಿ, ಸತ್ಯದ ಪರವಾಗಿ ಧ್ವನಿ ಎತ್ತುತ್ತಿರುವ ನಮ್ಮ ನಾಯಕನ ಪರವಾಗಿ ಇಡೀ ದೇಶ ಹಾಗೂ ವಿರೋಧ ಪಕ್ಷಗಳು ನಿಂತಿವೆ ಎಂದರು.
ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜನರಿಂದ ಸಿಕ್ಕ ಪ್ರೀತಿ ವಿಶ್ವಾಸ, ಕನರ್ಾಟಕ ರಾಜ್ಯದಲ್ಲಿ ಅವರಿಗೆ ಸಿಕ್ಕ ಭವ್ಯ ಯಶಸ್ಸು ಸಹಿಸಲಾಗದೇ ರಾತ್ರೋರಾತ್ರಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ರಾಜ್ಯದಲ್ಲಿ ಅವರು ಯಾತ್ರೆ ಮಾಡಿದ ಮಾರ್ಗದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಸಿದೆ. ಮುಂದೆ ಅವರಿಗೆ ದೇಶದ ಪೂರ್ವದಿಂದ ಪಶ್ಚಿಮದವರೆಗೆ ಯಾತ್ರೆ ಮಾಡುವ ಸಲಹೆ ಬಂದಿದ್ದು, ಅವರ ಈ ಯಶಸ್ಸು, ಜನಪ್ರಿಯತೆ ಸಹಿಸಲಾಗದೇ ಬಿಜೆಪಿಯವರಿಗೆ ಹೊಟ್ಟೆ ಉರಿ ಆರಂಭವಾಗಿದೆ ಎಂದು ಟಾಂಗ್ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದಶರ್ಿ ಮರಿಗೌಡ ಹುಲಕಲ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಕಾರಕ್ಕೆ ಬಂದು 9 ವರ್ಷ ಕಳೆದಿದೆ. ಆದರೆ ಇಂದಿಗೂ ದೇಶದ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ರೂಪಿಸಲಿಲ್ಲ. ಕೇವಲ ಕಾಂಗ್ರೆಸ್ನ್ನು ಮತ್ತು ವಿರೋಧ ಪಕ್ಷಗಳನ್ನು ತುಳಿಯುವ ದ್ವೇಷದ ರಾಜಕೀಯ ಮಾಡುತ್ತಿದೆ. ಬಿಜೆಪಿಯ ಎರಡು ಮುಖಗಳನ್ನು ಜನತೆ ಕಂಡಿದ್ದಾರೆ ಎಂದು ಕಿಡಿಕಾರಿದರು.