ಚಿಕ್ಕಮಗಳೂರು: ದೇಶ ರಕ್ಷಣೆ ಮಾಡುತ್ತಿರುವ ಭಾರತೀಯ ಸೇನೆ ವಿರುದ್ಧ ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವುದನ್ನು ಜಿಲ್ಲಾ ಬಿಜೆಪಿ ಸ್ವಾಗತಿಸಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕನ ಜವಬ್ದಾರಿಯನ್ನು ಮರೆತಂತಿರುವ ರಾಹುಲ್ ಗಾಂಧಿ ಅವರು ಕೇವಲ ಪ್ರಚಾರದ ಉz್ದೆÃಶದಿಂದ ದೇಶ ವಿರೋಧಿ ಹೇಳಿಕೆಗಳನ್ನು ಹಿಂದೆಯೂ ನೀಡಿ ಕೋರ್ಟ್ ತರಾಟೆಗೆ ಒಳಗಾಗಿದ್ದರು. ಅದನ್ನು ಗಮನದಲ್ಲಿಟ್ಟುಕೊಳ್ಳದೆ ಪದೇ ಪದೆ ದೇಶ ವಿರೋಧಿ ಹೇಳಿಕೆ ನೀಡುವ ಚಾಳಿ ಮುಂದುವರಿಸಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವುದೇ ಲೋಪಗಳಿದ್ದರೆ ಲೋಕಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಚರ್ಚೆ ಮಾಡಲು ಅವಕಾಶ ಇದ್ದಾಗಲೂ ಸದನದ ಹೊರಗೆ ದೇಶ ವಿರೋಧಿ ಹೇಳಿಕೆ ನೀಡುತ್ತಿರುವುದು ದೇಶ ಕಾಯುವ ಸೇನಾನಿಗಳಿಗೆ ಮತ್ತು ದೇಶದ ಪ್ರಜೆಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಛೇಡಿಸಿದ್ದಾರೆ.
ಯಾವುದೇ ದಾಖಲೆ ಇಲ್ಲದೆ ಚೀನಾ ನಮ್ಮ ಎರಡು ಸಾವಿರ ಚದರ ಕಿಮೀ ಭೂ ಪ್ರದೇಶವನ್ನು ಆಕ್ರಮಿಸಿಕೊಂಡು ೨೦ ಭಾರತೀಯ ಸೈನಿಕರನ್ನು ಕೊಂದಿದೆ. ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರ ಮೇಲೆ ಚೀನಾ ಸೈನಿಕರು ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ನೀಡಿರುವ ತೀರ್ಪು ದೇಶದ ಜನರ ಗೌರವದ ಪ್ರತೀಕವಾಗಿದೆ. ಕೋರ್ಟ್ ತೀರ್ಪನ್ನು ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.
ಕೋರ್ಟ್ ನೀಡಿರುವ ತೀರ್ಪನ್ನು ಕಡೆಗಣಿಸಿ ರಾಹುಲ್ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ತನ್ನ ಸಹೋದರನ್ನು ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ಅವರುಗಳ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತಿದೆ. ರಾಹುಲ್ ಗಾಂಧಿ ಅವರಿಗೆ ಉತ್ತಮ ವೈದ್ಯರ ಸಲಹೆ ಅಗತ್ಯವಿದೆ ಎಂದಿರುವ ಅವರು, ದೇಶ ವಿರೋಧಿ ಹೇಳಿಕೆ ನೀಡುವುದನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ.