ಬಾಗಲಕೋಟೆ: ನಗರದ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ನೂತನವಾಗಿ ನವೀಕರಿಸಲಾದ, ಅತ್ಯಾಧುನಿಕ ಕೃಷ್ಣಾ ಮತ್ತು ಘಟಪ್ರಭಾ ವಿಶೇಷ ವಾರ್ಡ್ಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು.
ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಮಾತನಾಡಿ, ಕುಮಾರೇಶ್ವರ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಅಽಕವಾಗುತ್ತಿದ್ದು, ರೋಗಿಗಳ ಹಿತದೃಷ್ಠಿಯಿಂದ ಹೆಚ್ಚುವರಿಯಾಗಿ ಹನ್ನೆರಡು ಕೊಠಡಿಗಳ ಎರಡು ಅತ್ಯಾಧುನಿಕ ಸ್ಪೆಶಲ್ ವಾರ್ಡಗಳನ್ನು ಅಂದಾಜು ಎರಡು ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದ್ದು, ರೋಗಿಗಳಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗಿದೆ. ಜೊತೆಗೆ ರೋಗಿಗಳ ಕೈಗೆಟುಕುವಂತೆ ರಿಯಾಯಿತಿ ದರದಲ್ಲಿ ಕೊಠಡಿಗಳ ದರ ನಿಗದಿ ಮಾಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂತನ ಕೃಷ್ಣಾ ಮತ್ತು ಘಟಪ್ರಭಾ ವಾರ್ಡುಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಮೆಡಿಕಲ್ ಕಾಲೇಜ್ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಽÃಕ್ಷಕ ಡಾ. ಶ್ರೀರಾಮ ಕೋರಾ ಇತರರು ಇದ್ದರು.