ಜಿಲ್ಲೆ

ರೀಲ್ಸ್ ಮಾಡುತ್ತಿದ್ದಾಗ ಬಿದ್ದು ಯುವಕನಿಗೆ ಗಂಭೀರ ಗಾಯ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಬೆಂಡರಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ರೀಲ್ಸ್ ಮಾಡಲು ಹೋಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ತಾಲೂಕಿನ ಉತ್ತಂಬಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಮಗ ಸತ್ಯ(18) ಗಾಯಾಳು.ಈತ ರೀಲ್ಸ್ ಮಾಡಲು ಜಮೀನಿನಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಜಿಗಿದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಟ್ರ್ಯಾಕ್ಟರ್‌ಗೆ ಹಿಂಬದಿ ಚಕ್ರ ಯುವಕನ ಹೊಟ್ಟೆ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯವಾಗಿದೆ.
ಬಳಿಕ ಸ್ಥಳೀಯರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಯುವಕನನ್ನು ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮೈಸೂರ ಆಸ್ಪತ್ರೆಗೆ ರವಾನಿಸಲಾಗಿದೆ.