ಜಿಲ್ಲೆ

ರೀಲ್ಸ್‌ಗಾಗಿ ನಕಲಿ ಪಿಸ್ತೂಲ್ ಹಿಡಿದುಕೊಂಡು ಓಡಾಟ:ಇಬ್ಬರ ಬಂಧನ

ಹಾಸನ : ಸಿನಿಮೀಯ ಶೈಲಿಯಲ್ಲಿ ಪಿಸ್ತೂಲ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿ ಅದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಇಬ್ಬರು ಯುವಕರು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಸೋಹೆಲ್ ಮತ್ತು ಸೈಯದ್ ಜಹಾನ್ ಎಂಬ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್ ಹಿಡಿದುಕೊಂಡು ಬೈಕ್‌ನಲ್ಲಿ ಓಡಾಡಿ ದುಂಡಾವರ್ತನೆ ತೋರಿದ ಹಿನ್ನೆಲೆಯಲ್ಲಿ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಯುವಕರು ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಪಿಸ್ತೂಲ್ ಹಿಡಿದು ಸಂಚಾರ ಮಾಡುವುದನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ನೆಲೆಯಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಇದು ನಕಲಿ ಪಿಸ್ತೂಲ್ ಎಂಬುದು ಖಾತ್ರಿಯಾಗಿದೆ ಮತ್ತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆಯೂ ಕೂಡ ವಾಹನ ಕಾಯ್ದೆಗಳು ಸೇರಿದಂತೆ ಮಾನವ ಪ್ರಾಣಕ್ಕೆ ಹಾನಿ ಮತ್ತು ಡಿಎಲ್ ಇಲ್ಲದ ಮಕ್ಕಳಿಗೆ ವಾಹನವನ್ನು ನೀಡಿದ ಹಿನ್ನೆಲೆಯಲ್ಲಿ ಸೋಹೆಲ್ ತಂದೆಯ ಮೇಲೆಯೂ ಪ್ರಕರಣ ದಾಖಲಿಸಲಾಗುವುದು ಎಂದು ಡಿವೈಎಸ್ಪಿ ಉದಯ್ ಭಾಸ್ಕರ್ ತಿಳಿಸಿದ್ದಾರೆ.