ಹುಬ್ಬಳ್ಳಿ: ರೈತರು ಹಾಗೂ ಕಾರ್ವಿುಕರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ರೈತ, ಕಾರ್ವಿುಕ ಕಾನೂನು ತಿದ್ದುಪಡಿ ನಿರ್ಧಾರ ಕೈಬಿಡಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು. ಕರೊನಾ ವೈರಸ್ ಸೂಕ್ತವಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲರಿಗೂ ಉಚಿತ ಚಿಕಿತ್ಸೆ ದೊರೆಯುವಂತೆ ಕ್ರಮ ಜರುಗಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಕರೊನಾ ಸಮಸ್ಯೆ ಮುಗಿಯುವವರೆಗೆ ಮಾಸಿಕ 7,500 ರೂ. ನೆರವು ಘೊಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಿಐಟಿಯು ಅಧ್ಯಕ್ಷ
ಎನ್.ಎ. ಖಾಜಿ, ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ದೇವಾನಂದ ಜಗಾಪುರ, ಬಿ.ಎಸ್ ಸೊಪ್ಪಿನ, ಎ.ಎಸ್. ಪೀರಜಾದೆ, ಬಾಬಾಜಾನ ಮುಧೋಳ, ಪುಂಡಲೀಕ ಬಡಿಗೇರ, ಇತರರು ಇದ್ದರು.