ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಮಟ್ಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ, ರಾಜ್ಯ ಕಾರ್ಯದರ್ಶಿ ವಿದ್ಯಸಾಗರ್ ಹಾಗೂ ರಾಜ್ಯ ಉಪಾಧ್ಯಕ್ಷ ರಘು ಅವರ ಸಮ್ಮುಖದಲ್ಲಿ ಜಿಲ್ಲೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅದರಂತೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷರಾಗಿ ಕೊಳ್ಳೇಗಾಲದ ಮೋಳೆ ರಾಮಕೃಷ್ಣ, ಅಧ್ಯಕ್ಷರಾಗಿ ಗೌಡಹಳ್ಳಿ ಸೋಮಣ್ಣ, ಉಪಾಧ್ಯಕ್ಷರಾಗಿ ಹುತ್ತನಗಿರಿ ಹುಂಡಿ ಮಹೇಶ್, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಜಿ.ಪಾಳ್ಯ ಪ್ರಭುಸ್ವಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್, ಸಹ ಕಾರ್ಯದರ್ಶಿಯಾಗಿ ಗೌಡಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಹಸಿರು ಸೇನೆ ಅಧ್ಯಕ್ಷರಾಗಿ ಪಿ.ಜಿ.ಪಾಳ್ಯ ಪವನ್ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳಿಂದ ಬಂದಿದ್ದ ರೈತ ಮುಖಂಡರು ಹಾಜರಿದ್ದರು.