filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.041968; highlight: 1; algolist: 0; multi-frame: 1; brp_mask: 8; brp_del_th: 0.0506,0.0000; brp_del_sen: 0.1500,0.0000; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 31; 
ಜಿಲ್ಲೆ

ರೈತ ಹುತಾತ್ಮ ದಿನದ ಅಂಗವಾಗಿ ಸಾಂಕೇತಿಕ ಪ್ರತಿಭಟನೆ

ಸರಗೂರು: ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ರೈತ ಹುತಾತ್ಮ ದಿನದ ಅಂಗವಾಗಿ ಸರಳವಾಗಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಅಧ್ಯಕ್ಷ ಚನ್ನನಾಯಕ ಮಾತನಾಡಿ, ಬೇಳಹಳ್ಳಿ ಚನ್ನರಾಯಪಟ್ಟಣದ 13 ಹಳ್ಳಿಗಳ 1,777 ಎಕರೆ ಭೂಸ್ವಾಧೀನವನ್ನು ಸರ್ಕಾರ ಕೈ ಬಿಟ್ಟಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಚನ್ನರಾಯಪಟ್ಟಣದ 1,777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿದ್ದು, ಕೊಟ್ಟ ಮಾತಿನಂತೆ ಸಿಎಂ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿ ವಾಪಸು ಪಡೆಯಬೇಕು ಹಾಗೂ ಎಪಿಎಂಸಿ ಕಾಯ್ದೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.

ರೈತ ಸಂಘದ ಯುವ ಘಟಕದ ಅಧ್ಯಕ್ಷ ನವೀನ್ ಹಳೆಹೆಗ್ಗುಡಿಲು ಮಾತನಾಡಿ, ಕೇಂದ್ರ ನ್ಯಾಷನಲ್ ಕೃಷಿ ಮಾರುಕಟ್ಟೆ, ಪ್ರೇಮ್ ವರ್ಕ್ ನೀತಿಯನ್ನು ತಿರಸ್ಕರಿಸಬೇಕು. ಹಾಗೆಯೇ ವಿದ್ಯುತ್ ಖಾಸಗೀಕರಣವನ್ನು ರಾಜ್ಯದಲ್ಲಿ ಜಾರಿಗೆ ತರಬಾರದು. ಕಾರ್ಮಿಕ ತಿದ್ದುಪಡಿ ಕೋಡ್‌ಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು. ರಸಗೊಬ್ಬರದ ಕೊರತೆಯನ್ನು ಸರಿಪಡಿಸಬೇಕು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಡಬೇಕು. 10 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂ ಮಂಜೂರಾತಿ ದೊರಕಬೇಕು. ಭೂ ವಿವಾದಗಳಿಂದಾಗುವ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ದಸಂಸ (ಅಂಬೇಡ್ಕರ್ ವಾದ) ಸಂಘಟನೆ ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಮಾತನಾಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಗೌರವಾಧ್ಯಕ್ಷ ಶಿವಕುಮಾರಸ್ವಾಮಿ, ಉಪಾಧ್ಯಕ್ಷ ಗಣೇಶ್ ಹಳಿಯೂರು, ಪ್ರಧಾನ ಕಾರ್ಯದರ್ಶಿ ನಂದೀಶ್ವರಸ್ವಾಮಿ, ಯುವ ಘಟಕದ ಅಧ್ಯಕ್ಷ ಶಿವಪ್ಪ,ಕಾರಯ್ಯ, ಕಾರ್ಯಾಧ್ಯಕ್ಷ ಕುಮಾರಗೌಡ, ಗೋವಿಂದನಾಯಕ, ರತ್ನಮ್ಮ, ಸಿದ್ದರಾಜು, ಮುಖಂಡರು ಹಾಜರಿದ್ದರು.