ಜಿಲ್ಲೆ

ರೈತಪರ ಕಾಳಜಿ ಹೊಂದಿದ್ದ ಶಿವಪ್ರಸಾದ್

ಕೆ.ಎಂದೊಡ್ಡಿ: ರೈತಪರ ಕಾಳಜಿ ಉಳ್ಳ ಸಾಮಾಜಿಕ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ವ್ಯಕ್ತಿ ಚಿಕ್ಕರಸಿನಕೆರೆ ಶಿವಪ್ರಸಾದ್ ಎಂದು ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಭಾವುಕರಾದರು.

ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಮುಖಂಡ ಚಿಕ್ಕರಸಿನಕೆರೆ ಶಿವಪ್ರಸಾದ್ ಅವರಿಗೆ ಇಲ್ಲಿನ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಿತೈಷಿ ಬಳಗದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ರೈತರ ಬಗೆಗೆ ಅಪಾರ ಕಾಳಜಿಯಿದ್ದು, ರೈತ ಸಂಘಟನೆಯಲ್ಲಿ ಇಲ್ಲದಿದ್ದರೂ ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡುತ್ತಿದ್ದರು. ಹಲವು ರೈತಪರ ಹೋರಾಟಗಳಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶಿವಪ್ರಸಾದ್ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ ಎಂದರು.

ಜಿ.ಪಂ.ಸದಸ್ಯ ಎ.ಎಸ್.ರಾಜೀವ್, ಪ್ರಗತಿಪರ ಚಿಂತಕ ನ.ಲಿ.ಕೃಷ್ಣ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕರಸಿನಕೆರೆ ಶಿವಲಿಂಗಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ನಿವೃತ್ತ ಪ್ರಾಧ್ಯಾಪಕ ಬಿ.ಎಸ್.ಬೋರೇಗೌಡ, ಮಣಿಗೆರೆ ಕಬ್ಬಾಳಯ್ಯ, ತಾ.ಪಂ. ಮಾಜಿ ಸದಸ್ಯ ಭರತೇಶ್ ಪಾಲ್ಗೊಂಡಿದ್ದರು.