ಚಾಮರಾಜನಗರ: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಪಹಣಿ ಹೊಂದಿರುವ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷ ಮತ್ತು ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಹಿರಿಯ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಚಾಮರಾಜನಗರ ಇವರ ಕಚೇರಿಯಲ್ಲಿ ಅಥವಾ ಇಲಾಖಾ ವೆಬ್‌ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿಗಳನ್ನು ಏ.1 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ತರಬೇತಿಯನ್ನು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ರಂಗಸಮುದ್ರದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ 2026ರ ಫೆ.28ರವರೆಗೆ ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ತೋಟಗಾರಿಕೆ ಉಪನಿರ್ದೇಶಕರು ಮತ್ತು ಸತ್ತಿ ರಸ್ತೆಯಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.