ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಅವರನ್ನು ಭೇಟಿ ಮಾಡಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಗ್ಯ ವಿಚಾರಿಸಿದರು. 
ಜಿಲ್ಲೆ

ರೈತರ ಮೇಲಿನ ಹಲ್ಲೆ ಸಹಿಸಲ್ಲ

ಟಿ.ಎಚ್.ಸಂತೋಷ್ ಕುಮಾರ್

ಸಾಗರ: ರೈತರ ಮೇಲೆ ಹಲ್ಲೆ ಮಾಡಿದ ಅಕಾರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ. ಯಾವ ಕಾರಣಕ್ಕೂ ರೈತರ ಮೇಲಿನ ಹಲ್ಲೆ ಸಹಿಸುವುದಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೇಟೆ ಅಥವಾ ಇನ್ನಿತರೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವ ಅಕಾರವಿದೆ. ಆದರೆ ನಿಮಗೆ ಹೊಡೆಯುವ ಅಕಾರ ಇಲ್ಲ ಎಂದರು.

ತುಮರಿಯ ಮಂಜುನಾಥ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ವೈದ್ಯಕೀಯ ವರದಿಯಲ್ಲಿ ಸಾಬೀತಾಗಿದೆ. ಪಕ್ಕೆಲುಬು ಮುರಿದು ಉಸಿರಾಟಕ್ಕೆ ತೊಂದರೆಯಾಗಿದೆ. ಮಂಜುನಾಥ್ ಅವರ ಮೇಲೆ ಹಲ್ಲೆ ಕುರಿತಂತೆ ಮತ್ತೊಂದು ಸುತ್ತಿನ ವರದಿ ನೀಡಲು ವೈದ್ಯರಿಗೆ ತಿಳಿಸಿದ್ದೇನೆ. ವರದಿ ಬಂದ ನಂತರ ದೌರ್ಜನ್ಯ ನಡೆಸಿದ ಅರಣ್ಯ ಅಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ನಿಮ್ಮ ವರ್ತನೆ ಬಗ್ಗೆ ಅರಣ್ಯ ಸಚಿವರಿಗೂ ತಿಳಿಸುತ್ತೇನೆ ಎಂದು ಸಭೆಗೆ ತಿಳಿಸಿದರು.

ಸಾಗರ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬದ್ಧವಾಗಿರಬೇಕು. ಇತ್ತೀಚೆಗೆ ವಿಜಯನಗರ ಬಡಾವಣೆಯಲ್ಲಿ ಸದಾನಂದ ಎಂಬುವವರ ಕೊಲೆಗೆ ಸಂಬಂಸಿ ಆರೋಪಿಗಳಿಬ್ಬರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದು ಏಕೆ ಎಂದು ಪ್ರಶ್ನಿಸಿದ ಶಾಸಕರು, ಠಾಣಾ ಜಾಮೀನಿನಲ್ಲಿ ಬಿಡುಗಡೆ ಮಾಡಿದ ಪೊಲೀಸ್ ಅಕಾರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಡಿವೈಎಸ್‌ಪಿಗೆ ಸೂಚಿಸಿದರು.

ಸಭೆಗೂ ಮೊದಲು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಅವರನ್ನು ಭೇಟಿ ಮಾಡಿ ಶಾಸಕರು ಆರೋಗ್ಯ ವಿಚಾರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಗಣಪತಿ ಮಂಡಗಳಲೆ, ಮಧುಮಾಲತಿ, ಗಣಪತಿ ಮಂಡಗಳಲೆ, ಜಿ.ಟಿ.ಸತ್ಯನಾರಾಯಣ ಇತರರಿದ್ದರು.