ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲೂಕಿನ ರೈತರಿಂದ ವಿವಿಧ ಯೋಜನೆಗಳಿಗೆ ಅ.15ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್, ಹನಿ ನೀರಾವರಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಎಲ್ಲ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳು,ಪ. ಜಾತಿ, ಪ. ಪಂಗಡ ಹಾಗೂ ಅತಿ ಸಣ್ಣ ರೈತರು, ಮಹಿಳೆಯರು ಹಾಗೂ ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ, ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಬಹುದು.