ಬೆಟ್ಟದಪುರ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ತಹಸೀಲ್ದಾರ್ ಎಂ.ಎಸ್.ಯದುಗಿರೀಶ್ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರೇವತಿ, ಸಣ್ಣಸ್ವಾಮಿ, ಎಂ.ಆರ್.ಮಂಜುನಾಥ್, ಅಕ್ಷಯ್, ಮಲ್ಲಿಕಾರ್ಜುನ್ ಇತರರಿದ್ದರು. 
ಜಿಲ್ಲೆ

ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ

ಬೆಟ್ಟದಪುರ: ಬೆಟ್ಟದಪುರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ಎಂ.ಎಸ್.ಯದುಗಿರೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖರೀದಿ ಕೇಂದ್ರದಲ್ಲಿ ರಾಗಿ ಸಂಗ್ರಹಣೆ, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲ ಸೌಕರ್ಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ರೈತರಿಂದ ಪಡೆದ ರಾಗಿಯನ್ನು ಚೀಲಗಳಿಗೆ ಬದಲಾವಣೆ ಮಾಡುವ ವೇಳೆ ಕಡ್ಡಾಯವಾಗಿ ತಳಭಾಗಕ್ಕೆ ಟಾರ್ಪಾಲ್ ವ್ಯವಸ್ಥೆ ಮಾಡಿಕೊಳ್ಳಬೇಕು, ಇದರಿಂದ ರಾಗಿ ವ್ಯರ್ಥವಾಗುವುದು ತಪ್ಪಲಿದೆ ಎಂದು ಸಲಹೆ ನೀಡಿದರಲ್ಲದೆ, ತೂಕ ಪರಿಶೀಲಿಸಿ ಹಾಗೂ ಗುಣಮಟ್ಟದ ರಾಗಿ ಖರೀದಿ ಮಾಡಬೇಕು. ರೈತರಿಗೆ ಕುಡಿಯುವ ನೀರು, ಶೌಚಗೃಹ ಸಮಸ್ಯೆ ಸೇರಿದಂತೆ ಯಾವುದೇ ಮೂಲಸೌಕರ್ಯಗಳು ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಖರೀದಿ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಎಪಿಎಂಸಿ ಕಾರ್ಯದರ್ಶಿ ರೇವತಿ, ಆಹಾರ ಶಿರಸ್ತೇದಾರರಾದ ಸಣ್ಣಸ್ವಾಮಿ, ಎಂ.ಆರ್.ಮಂಜುನಾಥ್, ಖರೀದಿ ಕೇಂದ್ರದ ಅಧಿಕಾರಿ ಅಕ್ಷಯ್,ಮಲ್ಲಿಕಾರ್ಜುನ್, ಸಿಬ್ಬಂದಿ ಹಾಗೂ ರೈತರು ಹಾಜರಿದ್ದರು.