ಜಿಲ್ಲೆ

ರೈತರು ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿ

ಬಸವಕಲ್ಯಾಣ: ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)ದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಗ್ರಾಮ ಒನ್ ಸೇವಾ ಕೇಂದ್ರದಲ್ಲೂ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಮಾರ್ಥಂಡ ಮಚಕುರಿ ತಿಳಿಸಿದ್ದಾರೆ.