ಜಿಲ್ಲೆ

ರೈತಾಪಿ ಮಹಿಳೆಯರಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಮೈಸೂರು ವಿಭಾಗ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಭಾಗದ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತಾಪಿ ಮಹಿಳೆಯರಿಗೆ 5 ವಾರದ 20 ಕೋಳಿ ಮರಿಗಳನ್ನು ತಲಾ 20ರಂತೆ ವಿತರಿಸಿ ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೊಳ್ಳೇಗಾಲ ತಾಲೂಕಿನ ಪರಿಶಿಷ್ಟ ಜಾತಿಗೆ ಶೇ.17ರಷ್ಟು, ಪರಿಶಿಷ್ಟ ಪಂಗಡಕ್ಕೆ ಶೇ.71ರಷ್ಟು, ಸಾಮಾನ್ಯ ವರ್ಗಕ್ಕೆ ಶೇ.44 ಹಾಗೂ ಹಿಂದುಳಿದ ವರ್ಗಗಳಿಗೆ ಶೇ. 32ರಷ್ಟು ಸೇರಿದಂತೆ ಒಟ್ಟು 99 ಗುರಿಯನ್ನು ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಆಸಕ್ತಿಯುಳ್ಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಗ್ರಾಮೀಣ ಮಹಿಳೆಯರು, ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳೆ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು, ರೈತಾಪಿ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಕೊಳ್ಳೇಗಾಲ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳ (ಆಡಳಿತ) ಕಚೇರಿಯಲ್ಲಿ ಪಡೆದು ನ.20ರೊಳಗೆ ಸಲ್ಲಿಸಬೇಕು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.