ಕಲಬುರಗಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ರೈಲು ಹಳಿಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ನಗರ ಪೊಲೀಸ್ ಆಯುಕ್ತಾಲಯದಲ್ಲಿ ವೈರ್‌ಲೆಸ್ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಾಪುಗೌಡ (೪೫) ಆತ್ಮಹತ್ಯೆ ಮಾಡಿಕೊಂಡವರು. ಕಲಬುರಗಿ-ಬೀದರ್ ಡೆಮೋ ರೈಲಿಗೆ ನಗರದ ಬಿz್ದÁಪುರ ಕಾಲನಿಯ ರೈಲ್ವೆ ಹಳಿ ಬಳಿ ಮಂಗಳವಾರ ಮಧ್ಯಾಹ ಘಟನೆ ನಡೆದಿದೆ. ಲೋಕೋ ಪೈಲಟ್ ಮಾಹಿತಿಯಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ರೈಲಿಗೆ ಸಿಲುಕಿ ದೇಹ ಛಿದ್ರವಾಗಿದೆ. ಮೃತದೇಹವನ್ನು ಜಿ¯್ಲÁಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಹಲವು ದಿನಗಳಿಂದ ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅದೇ ಚಿಂತೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಹಲವು ದಿನಗಳಿಂದ ಅನಾರೋಗ್ಯ ರಜೆಯಲ್ಲಿದ್ದರು. ಕೆಲ ದಿನದ ಹಿಂದೆ ಕಾಣೆಯಾಗಿz್ದÁರೆ ಎಂದು ದೂರು ದಾಖಲಿಸಲಾಗಿತ್ತು ಎನ್ನಲಾಗಿದೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.