ಜಿಲ್ಲೆ

ರೈಲಿನಿಂದ ಬಿದ್ದು ವೃದ್ಧ ಸಾವು

ಮೈಸೂರು: ನಾಗನಹಳ್ಳಿಯ ತಿರುವಿನಲ್ಲಿ ಗುರುವಾರ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಪ್ರಯಾಣಿಕ ಮೃತಪಟ್ಟಿದ್ದಾರೆ.

ಬೆಂಗಳೂರು ನಿವಾಸಿ ಪ್ರಸನ್ನ (63)ಮೃತರು.

ಇವರು ಮುರುಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದು, ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.