ಮೈಸೂರು: ನಗರದ ಚಾಮರಾಜಪುರಂ ರೈಲು ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ರೈಲಿಗೆ ಸಿಲುಕಿ ಟೀ ವ್ಯಾಪಾರಿ ಗಿರೀಶ್(35) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಗ್ರಹಾರದ ನಿವಾಸಿ ನಾರಾಯಣ್ ಅವರ ಪುತ್ರರಾದ ಗಿರೀಶ್ ಚಾಮರಾಜಪುರಂ ರೈಲು ನಿಲ್ದಾಣದ ಬಳಿ ರೈಲ್ವೆ ಟ್ರಾೃಕ್‌ನಲ್ಲಿ ತಲೆ ಇಟ್ಟು ಮಲಗಿದ್ದು, ರೈಲು ಹರಿದು ರುಂಡ ಮತ್ತು ಮುಂಡ ಬೇರ್ಪಟ್ಟಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.