ಜಿಲ್ಲೆ

ರೈಲ್ವೆ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

ಹುಬ್ಬಳ್ಳಿ
ಕಳೆದ ಸೆ. 4ರಂದು ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ನಡೆಸಿದ್ದ ಜಿಡಿಸಿಇ ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿದ್ದರಿಂದ ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ರೈಲ್ವೆ ಟ್ರ್ಯಾಕ್‌ಮೆಂಟೈನರ್ ಯೂನಿಯನ್ ನೇತೃತ್ವದಲ್ಲಿ ನೂರಾರು ಉದ್ಯೋಗಾಕಾಂಕ್ಷಿಗಳು ನಗರದ ರೈಲ್ ಸೌಧದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪರೀಕ್ಷೆಗೆ ಮೊದಲೇ ಪ್ರಶ್ನೆ ಪತ್ರಿಕೆಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡಿವೆ. ಇದರಿಂದ ಹಗಲು, ರಾತ್ರಿ ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಉದ್ಯೋಗದ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.
ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಸಂದರ್ಭದಲ್ಲಿ ಮರು ಪರೀಕ್ಷೆ ನಡೆಸಿರುವ ಅನೇಕ ಉದಾಹರಣೆಗಳಿವೆ. ಆದಕಾರಣ ಇಲ್ಲಿಯೂ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಲಯದ ಮಹಾಪ್ರಬಂಧಕರಿಗೆ ಮನವಿ ಸಲ್ಲಿಸಿದರು.