ಜಿಲ್ಲೆ

ರೈಲ್ವೆ ನಿಲ್ದಾಣಕ್ಕೆ ಚುಂಚಶ್ರೀ ಭೇಟಿ


ನಾಗಮಂಗಲ: ತಾಲೂಕಿನ ಬಿಜಿ ನಗರದ ರೈಲ್ವೆ ನಿಲ್ದಾಣಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಇತ್ತೀಚೆಗೆ ಭೇಟಿ ನೀಡಿ ರೈಲುಗಳ ನಿಲುಗಡೆ ಹಾಗೂ ಇನ್ನಿತರ ಮಾಹಿತಿ ಪಡೆದರು. ಕೆಲ ರೈಲುಗಳು ಬಿಜಿ ನಗರ ನಿಲ್ದಾಣದಲ್ಲಿ ನಿಲುಗಡೆ ನೀಡುತ್ತಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಶ್ರೀಗಳು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ರೈಲ್ವೆ ಹಿರಿಯ ಅಧಿಕಾರಿಗಳ ಜತೆ ದೂರವಾಣಿ ಮೂಲಕ ಮಾತನಾಡಿ ನಿಲುಗಡೆ ನೀಡುವಂತೆ ಮನವಿ ಮಾಡಿದರು.
ಇದೇ ಸಂದರ್ಭ ಸ್ಥಳದಲ್ಲಿದ್ದ ಸಾರ್ವಜನಿಕರು ಜವರನಹಳ್ಳಿ ರೈಲ್ವೆ ಬ್ರಿಡ್ಜ್‌ನಿಂದ ರೈಲ್ವೆ ನಿಲ್ದಾಣದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸರಿಪಡಿಸಿಕೊಡುವಂತೆ ಶ್ರೀಗಳಿಗೆ ಮನವಿ ಮಾಡಿದರು. ಕೆಲಕಾಲ ರೈಲ್ವೆ ನಿಲ್ದಾಣದಲ್ಲಿ ಕುಳಿತು ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ಕೆಲ ಮಾಹಿತಿ ಪಡೆದರು.