ರಾಷ್ಟ್ರೀಯ ಡೆಂೆ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಡೆಂೆ ಜಾಗೃತಿ ಜಾಥಾಗೆ ಚಾಲನೆ ನೀಡಿದರು. ಎಚ್.ವಿ.ದರ್ಶನ, ಡಾ.ಎಸ್.ವಿ.ಮುನ್ಯಾಳ, ಡಾ.ಎಂ.ಎಸ್.ಪಲ್ಲೇದ ಇತರರಿದ್ದರು. 
ಜಿಲ್ಲೆ

ರೋಗ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

ಬೆಳಗಾವಿ: ಚಿಕೂನ್‌ಗುನ್ಯ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸದಂತೆ ಜನಸಾಮಾನ್ಯರು ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದ್ದಾರೆ.

ರಾಷ್ಟ್ರೀಯ ಡೆಂಗೆ ತಡೆ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಡೆಂಗೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ಮನೆ ಸುತ್ತಲಿನ ಪ್ರದೇಶದ ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್ ಸಿಮೆಂಟ್ ಟ್ಯಾಂಕ್, ಇನ್ನಿತರ ನೀರು ನಿಲ್ಲುವ ಸ್ಥಳಗಳಲ್ಲಿ ಈಡೀಸ್ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗೆ ತಡೆಗಟ್ಟಬಹುದು. ಡೆಂೆ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಪ್ರಮುಖವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್.ಪಲ್ಲೇದ ಮಾತನಾಡಿ, ಸರ್ಕಾರ, ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಜಿಪಂ ಸಿಇಒ ಎಚ್.ವಿ.ದರ್ಶನ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಾಕರ್ತೆಯರು, ಕೆಎಲ್‌ಇ ಔಷಧೀಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.