ಜಿಲ್ಲೆ

ರೋಗಗಳು ಹರಡದಂತೆ ಕ್ರಮವಹಿಸಿ

ಬಳ್ಳಾರಿ : ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಆಚರಿಸಲಾಗುತ್ತಿದ್ದು, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ವೈದ್ಯಾಧಿಕಾರಿಗಳು ಮುಂದಾಗಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೂಚಿಸಿದರು.
ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಮಲೇಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲಾದ್ಯಂತ ಮಳೆಯಾಗುತ್ತಿದ್ದು, ನಿಂತ ನೀರಿನ ತಾಣಗಳು ಹೆಚ್ಚಾಗಿ ಸೊಳ್ಳೆ ಸಾಂದ್ರತೆ ಹೆಚ್ಚಾಗುವುದರೊಂದಿಗೆ ಸಾಂಕ್ರಾಮಿಕ ರೋಗಗಳು (ಸೊಳ್ಳೆಯಿಂದ ಹರಡುವ) ಮಲೇರಿಯಾ, ಡೆಂಗೀ, ಚಿಕನ್‌ಗುನ್ಯ ಹಾಗೂ ಇತರೆ ಖಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಇವುಗಳ ಜಾಗೃತಿ ಕುರಿತು ಅರಿವು ಮೂಡಿಸಬೇಕು ಎಂದರು.
ಡಿಎಚ್‌ಒ ಡಾ.ವೈ.ರಮೇಶ ಬಾಬು ಮಾತನಾಡಿ, ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಸಮುದಾಯಕ್ಕೆ ಜಾಗೃತಿ ಮೂಡಿಸಲು ಆರೋಗ್ಯ ಕೇಂದ್ರದ ಎಲ್ಲ ಹಂತಗಳಲ್ಲಿ ಐಇಸಿ, ಬಿಸಿಸಿ ಗುಂಪುಸಭೆ, ಅಡ್ವಕೆಸಿ ಕಾರ್ಯಾಗಾರ, ಮಾಧ್ಯಮಗಳ ಮುಖಾಂತರ ಜಾಗೃತಿ ಮೂಡಿಸಲಾಗುತ್ತಿದೆ. ಜ್ವರ ಪ್ರಕರಣಗಳ ಶೀಘ್ರ ಪತ್ತೆ ಮತ್ತು ಸಂಪೂರ್ಣ ಚಿಕಿತ್ಸೆಯನ್ನು ನೀಡುವಲ್ಲಿ ಕಾರ್ಯೋನ್ಮುಖರಾಗುವಂತೆ ಕ್ರಮವಹಿಸಲು ತಿಳಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿದರು.