ಜಿಲ್ಲೆ

ರೋಟರಿ ಮಿಡ್‌ಟೌನ್‌ನಿಂದ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

ರಾಜಣ್ಣ

ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ರೋಟರಿ ಮಿಡ್‌ಟೌನ್ ವತಿಯಿಂದ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಗುರುವಾರ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತ್ಯುತ್ಸವ ಆಚರಿಸಲಾಯಿತು.

ಕೊಪ್ಪ ಗ್ರಾಮ ಪಂಚಾಯಿತಿ ಪೌರಕಾರ್ಮಿಕರಾದ ಕೃಷ್ಣ, ಚಂದ್ರು ಹಾಗೂ ರವಿ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ರೋಟರಿ ಮಿಟ್‌ಟೌನ್ ಅಧ್ಯಕ್ಷ ಜಿ.ಕೆ.ಜಗನ್ ಮಾತನಾಡಿ, ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತ ಗ್ರಾಮಗಳಲ್ಲಿ ಅವರ ಸೇವಾ ಕಾರ್ಯವೈಖರಿ ಹಾಗೂ ಕೊಪ್ಪ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅವರ ಶ್ರಮವನ್ನು ಗುರುತಿಸಿ ಸಂಸ್ಥೆ ವತಿಯಿಂದ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ತಾಲೂಕು ಖಜಾಂಚಿ ಐ.ಕೆ.ಪಿ.ಹೆಗಡೆ ಮತ್ತಿತರರಿದ್ದರು.