ಎಚ್.ಡಿ.ಕೋಟೆ ತಾಲೂಕಿನ ಕೆ.ಎಡತೊರೆ ಗ್ರಾಮದ ಲಕ್ಷ್ಮೀನಾರಾಯಣ ಅವರ ಅಡಕೆ ತೋಟದಲ್ಲಿ ಕಟಾವಿಗೆ ಬಂದಿದ್ದ ಅಡಕೆಯನ್ನು ದುಷ್ಕರ್ಮಿಗಳು ಕಳವು ಮಾಡಿದ್ದ ಸ್ಥಳಕ್ಕೆ ಪೊಲೀಸರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಜಿಲ್ಲೆ

ಲಕ್ಷಾಂತರ ರೂ. ಮೌಲ್ಯದ ಅಡಕೆ ಕಳವು

Mysuru

ಎಚ್.ಡಿ.ಕೋಟೆ: ತಾಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಕಟಾವಿಗೆ ಬಂದಿದ್ದ ಲಕ್ಷಾಂತರ ರೂ. ಮೌಲ್ಯದ ಅಡಕೆಯನ್ನು ಬುಧವಾರ ರಾತ್ರಿ ದುಷ್ಕರ್ಮಿಗಳು ಕಳವು ಮಾಡಿದ್ದಾರೆ.
ಗ್ರಾಮದ ಲಕ್ಷ್ಮೀನಾರಾಯಣ ಎಂಬುವರಿಗೆ ಸೇರಿದ 8 ಎಕರೆ ಅಡಕೆ ತೋಟಕ್ಕೆ ದುಷ್ಕರ್ಮಿಗಳು ಲಗ್ಗೆ ಹಾಕಿ ಗುರುವಾರ ಕಟಾವು ಮಾಡಬೇಕಿದ್ದ ಅಡಕೆಯನ್ನು ಕತ್ತರಿಸಿಕೊಂಡು ಕದ್ದೊಯ್ದಿದ್ದಾರೆ. ಅಂದಾಜು 2.5 ಲಕ್ಷ ರೂ. ಮೌಲ್ಯದ ಅಡಕೆ ಕಳುವಾಗಿದೆ ಎನ್ನಲಾಗಿದೆ.
ಗುರುವಾರ ಬೆಳಗ್ಗೆ ರೈತ ಲಕ್ಷ್ಮೀನಾರಾಯಣ ಅವರು ತೋಟಕ್ಕೆ ಹೋಗಿ ನೋಡಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ನಂತರ ರೈತ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಎಸ್‌ಐ ರಾಮು ಹಾಗೂ ಸಿಬ್ಬಂದಿ ಸುನಿಲ್, ಮೋಹನ್, ಕಬೀರ್ ಉದ್ದೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವು ಪೊಲೀಸರು ತನಿಖೆ ಕೈಗೊಂಡಿದ್ದಾರೆ.