ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ ಆ.೧೫ ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಲಿಸಲಿದೆ.
ಆ.೧೫ ರ ಬೆಳಗ್ಗೆ ೧೦ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ೩೦ ರೂ.ಕ್ಕೆ ನಿಗದಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ. ಬೆಳಗ್ಗೆ ೮ ಗಂಟೆಯಿಂದ ಸಂಜೆ ೬ ಗಂಟೆವರೆಗೆ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್‌ನಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ ೮ ಗಂಟೆವರೆಗೆ ಲಭ್ಯವಿರುತ್ತದೆ. ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎ್ಸಿ ಗೇಟ್‌ಗಳಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ತೋರಿಸಬೇಕಾಗುತ್ತದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.