ಅರಸೀಕೆರೆ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ತಾಲೂಕಿನ ಚನ್ನರಾಯಪಟ್ಟಣ ರಸ್ತೆಯ ಬೋರೇಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಸವನಪುರದಹಟ್ಟಿ ಗ್ರಾಮದ ಗಂಗಾಧರನಾಯ್ಕ(36) ಮೃತ. ಸಂಜೆ 7.30 ರಲ್ಲಿ ಮುದುಡಿ ಗ್ರಾಮಕ್ಕೆ ಹೋಗಿ ಅಂಗಡಿಯಲ್ಲಿ ದಿನಸಿ ಸಾಮಾನು ತೆಗೆದುಕೊಂಡು ಬೈಕ್‌ನಲ್ಲಿ ವಾಪಸ್ ಬರುತ್ತಿದ್ದಾಗ ಗಂಡಸಿ ಕಡೆಯಿಂದ ಬಂದ ಲಾರಿ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಗಂಗಾಧರನಾಯ್ಕ ಅವರಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ಗಂಗಾಧರ ನಾಯ್ಕ ಅವರ ತಲೆಗೆ ತೀವ್ರ ಸ್ವರೂಪದ ರಕ್ತ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.