ಮೈಸೂರು: ವೇಗವಾಗಿ ಬಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಹಿಂಬದಿ ಸವಾರ ಮೃತಪಟ್ಟಿದ್ದು, ಸವಾರ ಗಾಯಗೊಂಡಿದ್ದಾರೆ.
ಸ್ಕೂಟರ್‌ನಲ್ಲಿ ಕುಳಿತಿದ್ದ ಹಿಂಬದಿ ಸವಾರ ಶ್ರೀರಾಂಪುರದ ನಾಗರಾಜು (40) ಮೃತಪಟ್ಟವರು. ಸ್ಕೂಟರ್ ಚಲಾಯಿಸುತ್ತಿದ್ದ ಸವಾರ ಪುನೀತ್ ಗಾಯಗೊಂಡು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್‌ನಲ್ಲಿ ಲಿಂಗಾಂಬುಧಿಪಾಳ್ಯದ ಕಡೆಯಿಂದ ಶ್ರೀರಾಂಪುರದ ಕಡೆಗೆ ಹೋಗುತ್ತಿದ್ದಾಗ ಆದಿತ್ಯ ವೃತ್ತದ ಕಡೆಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತಿದ್ದ ನಾಗರಾಜ್ ತಲೆಯ ಮೇಲೆ ಲಾರಿ ಚಕ್ರ ಹರಿದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್.ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.