ಬೇಲೂರು : ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಂದಿಹಳ್ಳಿ ಸಮೀಪ ಗುರುವಾರ ನಡೆದಿದೆ.
ಸಕಲೇಶಪುರ ತಾಲ್ಲೂಕು ಈರಣ್ಣ ಪೇಟೆ ಗ್ರಾಮದ ರತ್ನ (32) ಮೃತರು. ಸುನೀಲ್, ರತ್ನ ಹಾಗು ಸುಶೀಲಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಬಂದಹಳ್ಳಿ ಸಮೀಪ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುತ್ತಿದ್ದಾಗ ಲಾರಿ ಚಾಲಕ ದಿಢೀರನೆ ಬಲಕ್ಕೆ ತಿರುಗಿಸಿದ ಪರಿಣಾಮ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುಶೀಲಮ್ಮ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಗಾಯಾಳು ಸುನೀಲ್ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.