ಜಿಲ್ಲೆ

ಲೈಂಗಿಕ ಕಿರುಕುಳ ಅಪರಾಧಿಗೆ ಶಿಕ್ಷೆ ಪ್ರಕಟ

ಲೈಂಗಿಕ ಕಿರುಕುಳ ಅಪರಾಧಿಗೆ ಶಿಕ್ಷೆ ಪ್ರಕಟ

ಬೆಳಗಾವಿ: ಜಿಲ್ಲೆಯ ಅಥಣಿ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ  20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ.

ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ನಿವಾಸಿ ದಾವಲ ಹುಸೇನಿ ಮುಲ್ಲಾ ಶಿಕ್ಷೆಗೆ ಒಳಗಾದ ಅಪರಾಧಿ.

ಘಟನೆ ವಿವರ: ಶಿಕ್ಷೆಗೆ ಒಳಗಾದ ಅಪರಾಧಿಯು 2023ರಲ್ಲಿ  ಅಪ್ರಾಪ್ತ ಮಂದ ಬುದ್ಧಿ ಬಾಲಕಿಯನ್ನು ಪುಸಲಾಯಿಸಿ ಒತ್ತಾಯ ಪೂರ್ವಕವಾಗಿ  ಅತ್ಯಾಚಾರ ಎಸಗಿದ್ದನು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಅಥಣಿ ಪೊಲೀಸ್ ಠಾಣೆ ತನಿಖಾಧಿಕಾರಿ ರವೀಂದ್ರ ನಾಯ್ಕೋಡಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ  ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.