ಜಿಲ್ಲೆ

ಲೈಂಗಿಕ ಕಿರುಕುಳ : ಅಪರಾಧಿಗೆ ಶಿಕ್ಷೆ ಪ್ರಕಟ

ಲೈಂಗಿಕ ಕಿರುಕುಳ : ಅಪರಾಧಿಗೆ ಶಿಕ್ಷೆ ಪ್ರಕಟ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ೨೦ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೧೦ ಸಾವಿರ ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.

ಹುಕ್ಕೇರಿ ತಾಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಶಶಿಕುಮಾರ ಶಿವಪ್ಪಾ ತಳವಾರ ಶಿಕ್ಷೆಗೆ ಒಳಗಾದ ಅಪರಾಧಿ.

ಘಟನೆ ವಿವರ: ಶಿಕ್ಷೆಗೆ ಒಳಗಾದ ಅಪರಾಧಿಯು ೨೦೧೫ರಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಹುಕ್ಕೇರಿ ಪೊಲೀಸ್ ಠಾಣೆ ತನಿಖಾಧಿಕಾರಿ ಎಸ್.ಸಿ ಮುರಗೋಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧಿಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.