ಜಿಲ್ಲೆ

ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಬೆಳಗಾವಿ: ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಆಲ್​ ಇಂಡಿಯಾ ಡೆಮಾಕ್ರೆಟಿಕ್​ ಸ್ಟೂಡೆಂಟ್ಸ್​ ಆರ್ಗನೈಜೇಶನ್​ ನೇತೃತ್ವದಲ್ಲಿ ನಗರದಲ್ಲಿ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮೇಲೆ ಇಬ್ಬರು ಉಪನ್ಯಾಸಕರು ಹಾಗೂ ಓರ್ವ ಸ್ನೇಹಿತ ಲೈಂಗಿಕ ದೌರ್ಜನ್ಯ ಎಸಗಿ ಬ್ಲಾಕ್​ಮೇಲ್​ ಮಾಡಿ ಬೆದರಿಕೆ ಹಾಕಿದ್ದಾರೆ. ಮೂವರಿಗೆ ಕಠಿಣ ಶಿೆ ನೀಡಿ ಮುಂದೆ ಈ ರೀತಿಯ ಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿಎಸ್​ಒನ ಜಿಲ್ಲಾ ಸಂಚಾಲಕ ಮಹಾಂತೇಶ ಬೀಳೂರ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.