ಹಾಸನ: ಕಾರ್ಮಿಕ ಇಲಾಖೆಯ ಅಧಿಕಾರಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಗರದಲ್ಲಿ ನಡೆದಿದೆ.
ಕಾರ್ಮಿಕ ಇಲಾಖೆಯಯಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾಗಿರುವ ಪರಶುರಾಮ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಹೋಟೆಲ್ ಮಾಲೀಕರಾಗಿರುವ ಅರುಣ್ ಎಂಬುವವರಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಸೋಮವಾರ ಕಾರ್ಮಿಕ ಇಲಾಖೆಯಲ್ಲಿ ಹತ್ತು ಸಾವಿರ ಲಂಚ ಪಡೆಯುವಾಗ ಏಕಾಏಕಿ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ಬಲೆಗೆ ಬೀಳಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.