ಜಿಲ್ಲೆ

ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಚಿತ್ರದುರ್ಗ: ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜೂ.27 ರಂದು ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸಲಿದ್ದಾರೆ. 27ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಹೊಸದುರ್ಗ, ಮೊಳಕಾಲ್ಮೂರು ತಾಪಂ ಕಚೇರಿಗಳಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30ರಿಂದ ಸಂಜೆ 5.30ರ ವರೆಗೆ ಚಳ್ಳಕೆರೆ ತಾಪಂ ಕಚೇರಿ. 28ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಹಿರಿಯೂರು ತಾ.ಪಂ., ಮಧ್ಯಾಹ್ನ 2.30ರಿಂದ ಸಂಜೆ 5.30ರ ವರೆಗೆ ಚಿತ್ರದುರ್ಗ ತಾಪಂ ಅದೇ ದಿನ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಪಂ ಕಚೇರಿಗಳಲ್ಲಿ ದೂರು, ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.