ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ಸೆ.27ರಿಂದ ಅ.1 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಆಯಾ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸೆ.27ರಂದು ಗುಂಡ್ಲುಪೇಟೆಯ ಪ್ರವಾಸಿ ಮಂದಿರ, 28ರಂದು ಯಳಂದೂರು, 29ರಂದು ಚಾಮರಾಜನಗರ, 30 ರಂದು ಹನೂರು ಹಾಗೂ ಅಕ್ಟೋಬರ್ 1 ರಂದು ಕೊಳ್ಳೇಗಾಲ ಪ್ರವಾಸಿಮಂದಿರದಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.
ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಲಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣಕ್ಕೆ ಒತ್ತಾಯ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧ ಸಾರ್ವಜನಿಕರು ಮಾಹಿತಿ, ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.