ವಿಜಯಪುರ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಡಿ. 1 ರಿಂದ 3 ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.1 ರಂದು ಮಧ್ಯಾಹ್ನ 1.45ಕ್ಕೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪಡೇಕನೂರ ಗ್ರಾಮಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಡಿ. 2 ರಂದು ಬೆಳಗ್ಗೆ 9 ಕ್ಕೆ ವಿವಿಧ ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.30ರಿಂದ ಸಂಜೆ 5.30 ರವರೆಗೆ ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿ. 3ರಂದು ಬೆಳಗ್ಗೆ 10.30ಕ್ಕೆ ವಿವಿಧ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಹಾಗೂ ವಿವಿಧ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ 6 ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಬಾರ್ ಅಸೋಸಿಯೇಶ್ ವತಿಯಿಂದ ಹಮ್ಮಿಕೊಂಡ ನ್ಯಾಯವಾದಿಗಳ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, 7.30ಕ್ಕೆ ವಿಜಯಪುರದಿಂದ ಹೊಸಪೇಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.