ಜಿಲ್ಲೆ

ವಂತಿಗೆ ವಸೂಲಿ, ಖಾಸಗಿ ಶಾಲೆಗಳ ವಿರುದ್ಧ ಆಕ್ರೋಶ

ಚಿತ್ರದುರ್ಗ: ವಿದ್ಯಾರ್ಥಿಗಳಿಂದ ವಂತಿಗೆ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಡಿಸಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ದೇಣಿಗೆ ಹೆಸರಲ್ಲಿ ಪಾಲಕರಿಂದ ಅತಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್ ಮಾತನಾಡಿ, ಮಿತಿ ಮೀರಿ ವಂತಿಗೆ ವಸೂಲು ಮಾಡುವಂಥ ಸಂಸ್ಥೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಬೇಕಿದೆ ಎಂದರು.

ವೀಣಾಗೌರಣ್ಣ, ಗೋಪಿನಾಥ್, ಜಗದೀಶ್, ಅವಿನಾಶ್, ಹರೀಶ್‌ಕುಮಾರ್, ಮುಜಾಯಿದ್, ನಾಗೇಶ್, ಶಶಿಧರ್, ಅಖಿಲೇಶ್, ವಿಜಯಬಾಬು, ರತ್ನಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.