ಜಿಲ್ಲೆ

ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಒತ್ತಾಯಿಸಿ ವಕೀಲರ ಪ್ರತಿಭಟನೆ

ಹಾಸನ: ವಕೀಲರ ಹಿತರಕ್ಷಣಾ ಕಾಯ್ದೆ 2022ನ್ನು ರಾಜ್ಯ ಸರ್ಕಾರವು ಶೀಘ್ರದಲ್ಲಿ ಜಾರಿಗೆ ತರುವಂತೆ ಒತ್ತಾಯಿಸಿ ಹಾಸನ ಜಿಲ್ಲಾ ವಕೀಲ ಸಂಘದ ವತಿಯಿಂದ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಎಂಎಸ್ ಅರ್ಚನಾವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ವಕೀಲ ಸಂಘದ ಜಿಲ್ಲಾಧ್ಯಕ್ಷ ಎಂ.ಜಿ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ರಾಜ್ಯಾದ್ಯಂತ ಲಕ್ಷಾಂತರ ವಕೀಲರು ವೃತ್ತಿಯಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುತ್ತಿದ್ದು ಮತ್ತು ಸಾರ್ವಜನಿಕರ ಕುಂದು ಕೊರತೆ ಹಾಗೂ ಅವರಿಗುಂಟಾದ ಅನ್ಯಾಯಗಳನ್ನು ಸರಿಪಡಿಸಲು ಶ್ರಮಿಸುತ್ತಿದ್ದು, ಇಂತಹ ಒಂದು ವಕೀಲ ಸಮುದಾಯದ ಮೇಲೆ ಇತ್ತೀಚಿನ ದಿನಗಳಲ್ಲಿ ದಬ್ಬಾಳಿಕೆ ದೌರ್ಜನ್ಯ ಮತ್ತು ಹಲ್ಲೆಯಂತಹ ಗಂಭೀರ ಸ್ವರೂಪದ ಪ್ರಕರಣಗಳು ನಡೆಯುತ್ತಿದೆ ಂದು ಬೇಸರ ವ್ಯಕ್ತ ಪಡಿಸಿದರು.


ಇಂತಹ ಘಟನೆಗಳು ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವಕೀಲ ಸಮುದಾಯದಲ್ಲಿ ಭಯವನ್ನು ಹುಟ್ಟಿಹಾಕಿದ್ದು ಹೆದರಿಕೆಯಿಂದ ಕೆಲಸ ಮಾಡುವಂತಹ ಪರಿಸ್ಥಿತಿ ಉಂಟಾಗಿರುತ್ತದೆ. ಇದರಿಂದ ವೃತ್ತಿಪರ ವಕೀಲರಿಗೆ ಮಾನಸಿಕ ಹಾಗೂ ದೈಹಿಕವಾಗಿ ಕುಂದುಂಟಾಗುತ್ತಿರುತ್ತದೆ. ಈ ಎಲ್ಲಾ ಅಂಶಗಳನ್ನು ಮನಗಂಡು ರಾಜ್ಯ ಸರ್ಕಾರಕ್ಕೆ ವಕೀಲ ಸಮುದಾಯವು ಒಕ್ಕೋರಿಲಿನಿಂದ ವಕೀಲ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಬೇಡಿಕೆ ಇಡುತ್ತಿದ್ದೇವೆ ಎಂದರು.

ರಾಜ್ಯ ಸರ್ಕಾರವು ಇತ್ತೀಚೆಗೆ ವಕೀಲ ಸಮುದಾಯದ ಒತ್ತಡಕ್ಕೆ ಮಣಿದು ಶೀಘ್ರದಲ್ಲಿಯೇ ವಕೀಲ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಭರವಸೆ ನೀಡಿತ್ತು. ಆದರೆ ರಾಜ್ಯ ಸರ್ಕಾರವು ಮತ್ತೊಮ್ಮೆ ಕಾಯ್ದೆಯನ್ನು ಜಾರಿಗೆ ತರಲು ವಿಳಂಬ ಧೋರಣೆಯನ್ನು ಅನುಸರಿಸಿತ್ತು. ಮತ್ತೆ ರಾಜ್ಯಾದ್ಯಂತ ವಕೀಲ ಸಮುದಾಯವು ಪ್ರತಿಭಟನೆಯ ಕರೆ ನೀಡಿದಾಗ ರಾಜ್ಯ ಸರ್ಕಾರವು ವಕೀಲರ ಹಿತ ರಕ್ಷಣಾ ಕಾಯ್ದೆ 2022ನ್ನು ಅಧಿವೇಶನದಲ್ಲಿ ಮಂಡಿಸಿ ಕಾಯ್ದೆ ರೂಪಿಸುವುದಾಗಿ ಭರವಸೆ ನೀಡಿತ್ತು. ಆದರೆ ಯಾವುದೇ ಒ್ರಯೋಜನ ವಾಗಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ರಾಜ್ಯ ಸರ್ಕಾರವು ವಕೀಲರ ಹಿತ ರಕ್ಷಣಾ ಕಾಯ್ದೆ 2022 ನ್ನು ಜಾರಿಗಿಳಿಸುವಂತೆ ಒತ್ತಾಯಿಸಿ ಈ ದಿನ ರಾಜ್ಯ ಭವನದ ಚಲೋ ಮತ್ತು ವಿಧಾನ ಸೌಧದ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ವಕೀಲರು ಒಟ್ಟುಗೂಡಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಾಸನ ಜಿಲ್ಲಾ ವಕೀಲರ ಸಂಘವು ಸಹ ಬೆಂಬಲ ನೀಡುವ ಮೂಲಕ ರಾಜ್ಯ ಸರ್ಕಾರವು ವಕೀಲರ ಹಿತ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಕೀಲ ಸಮುದಾಯವನ್ನು ಕಾಪಾಡುವಂತೆ ಈ ಮೂಲಕ ಮನವಿ ಮಾಡುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ರಂಗಸ್ವಾಮಿ, ಕೆ.ವಿ ಲೋಹಿತ್, ಎಸ್.ಬಿ ಮಂಜುನಾಥ್, ಬಿ.ಎಲ್ ಲಲಿತ, ಎಚ್.ಎಸ್ ಮಂಜುನಾಥ ಮೂರ್ತಿ, ಕೆ.ಕೆ ಮೋಹನ್ ಕುಮಾರ್, ಯು.ಎಂ ಚಿದಾನಂದ, ಕೆ.ಎನ್ ದಿಲೀಪ್ ಕುಮಾರ್, ಎ.ಜೆ ರಘು ಇತರರು ಇದ್ದರು.