ಜಿಲ್ಲೆ

ವಚನ ದರ್ಶನ ಪುಸ್ತಕ ಲೋಕಾರ್ಪಣೆ 3ರಂದು

ಕಲಬುರಗಿ: ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಂಟಿ ಆಶ್ರಯದಲ್ಲಿ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಆ.೩ರಂದು ಸಂಜೆ ೬ಕ್ಕೆ `ವಚನ ದರ್ಶನ' ಕೃತಿ ಲೋಕಾರ್ಪಣೆ ನಡೆಯಲಿದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಡಾ.ಸಂಗಮೇಶ ಹಿರೇಮಠ ತಿಳಿಸಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಣಿ ಅಪ್ಪ ಸಾನ್ನಿಧ್ಯ ವಹಿಸಲಿದ್ದಾರೆ. ಬಸವ ಸಮಿತಿ ಅಧ್ಯಕ್ಷೆ ಡಾ.ವಿಲಾಸವತಿ ಖೂಬಾ ಮುಖ್ಯ ಅತಿಥಿಯಾಗಿದ್ದಾರೆ. ಗದುಗಿನ ಶ್ರೀ ಸದಾಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬಿಜೆಪಿ ರಾಷ್ಟಿçÃಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ವಚನ ದರ್ಶನದ ಕುರಿತು ಅನಿಸಿಕೆ ಹಂಚಿಕೊಳ್ಳಲಿದ್ದಾರೆ.