ಜಿಲ್ಲೆ

ವಡ್ಡಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಡ್ಡಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕ್ಲಸ್ಟರ್ ವ್ಯಾಪ್ತಿಯ ನಾನಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ವಿ.ಇ.ನಾಗೇಂದ್ರ, ಮುದ್ದಮಾದಯ್ಯ, ಮುಖ್ಯ ಶಿಕ್ಷಕರಾದ ಭೋಗಪ್ಪ, ಶಿವನಂಜಪ್ಪ, ಸಿದ್ದಲಿಂಗದೇವರು, ಸಹ ಶಿಕ್ಷಕರಾದ ಶ್ರೀನಿವಾಸ, ನಂಜಪ್ಪ, ಶಿವನಾಗಪ್ಪ, ಶ್ರುತಿ, ನಾಗಮಣಿ ಚೈತ್ರಾ ಹಾಗೂ ವಿದ್ಯಾರ್ಥಿಗಳು ಇದ್ದರು.