ಚಿಕ್ಕಮಗಳೂರಿನ ಶ್ರೀನಿವಾಸ ನಗರದಲ್ಲಿ ಅರಣ್ಯ ಇಲಾಖೆಯಿಂದ ಹುತಾತ್ಮರ ದಿನಾಚರಣೆ ನಡೆಸಿ ಹುತಾತ್ಮ ಅರಣ್ಯ ಸಿಬ್ಬಂದಿ ಮೌನಾಚರಣೆ ನಡೆಸಲಾಯಿತು. ವಿ.ಹನುಮಂತಪ್ಪ, ಯಶ್‌ಪಾಲ್ ಕ್ಷೀರಸಾಗರ, ರಮೇಶ್ ಬಾಬು, ಬೋರಯ್ಯ, ಕೆ.ಸಿ.ಆನಂದ್ ಮತ್ತಿತರರಿದ್ದರು. 
ಜಿಲ್ಲೆ

ವನ ಸಂಪತ್ತು ಇದ್ದರೆ ಜೀವ ಸಂಕುಲಗಳು ಉಳಿಯಲು ಸಾಧ್ಯ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ. ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಎಲ್ಲರೂ ಕಾನೂನು ಪಾಲಕರಾದರೆ ಯಾವುದೆ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ತಿಳಿಸಿದರು.

ನಗರದ ಶ್ರೀನಿವಾಸ ನಗರದಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಅರಣ್ಯ ಹುತಾತ್ಮ ದಿನಾಚರಣೆಯಲ್ಲಿ ದಿ.ಪಿ.ಶ್ರೀನಿವಾಸ್ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಅವರು, ಮಾನವನ ದುರಾಸೆಯಿಂದ ವನ ಮತ್ತು ವನ್ಯಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದಾನೆ. ಅರಣ್ಯ ಸಂಪತ್ತನ್ನು ನಾಶ ಮಾಡುತ್ತಿರುವುದರಿಂದ ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ ಎಂದು ಹೇಳಿದರು.

ವನ್ಯಜೀವಿಗಳ ಆವಾಸ ಸ್ಥಾನವನ್ನು ಮನುಷ್ಯರು ಆಕ್ರಮಿಸುತ್ತಿರುವುದರಿಂದ ಅವು ದಿಕ್ಕುತೋಚದೆ ನಗರಪ್ರದೇಶದತ್ತ ದಾವಿಸುತ್ತಿವೆ. ಪ್ರಾಣಿ, ಪಕ್ಷಿಗಳು ಸೇರಿದಂತೆ ಇರುವೆಯಿಂದ ಆನೆಯವರೆಗೂ ಎಲ್ಲವೂ ವಾಸಿಸುವ ಸ್ಥಳ ಅರಣ್ಯ ಪ್ರದೇಶಗಳು. ಅವುಗಳು ಉಳಿದರೆ ಮಾತ್ರವೇ ನಾವುಗಳು ಉಳಿಯಲು ಸಾಧ್ಯ ಎಂದರು.

ನಮ್ಮ ರಾಜ್ಯದ ಓರ್ವ ದಕ್ಷ, ನಿಷ್ಠಾವಂತ ಪ್ರಾಮಾಣಿಕ ಅರಣ್ಯಾಧಿಕಾರಿ ಪಿ.ಶ್ರೀನಿವಾಸ್ ಅವರು ಕಾಡುಗಳ್ಳ ವೀರಪ್ಪನ್‌ನ ಕುತಂತ್ರಕ್ಕೆ ಬಲಿಯಾಗಿ ಹುತಾತ್ಮ ರಾಗಿದ್ದಾರೆ. ಇಂಥಹವರು ಸಾಕಷ್ಟು ಮಂದಿ ಇದ್ದಾರೆ. ಅರಣ್ಯ ಉಳಿವಿಗಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಹುತಾತ್ಮ ದಿನಾಚರಣೆ ಎಂದರೆ ಮನಸ್ಸಿನಲ್ಲಿ ಒಂದು ರೀತಿ ವೇದನೆ ಇರುತ್ತದೆ. ಲಕ್ಷಾಂತರ ಮಂದಿ ದೇಶವನ್ನು ಸಂರಕ್ಷಣೆ ಮಾಡಬೇಕೆಂಬ ದೃಷ್ಟಿಯಿಂದ ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಗಡಿಭಾಗದಲ್ಲಿ ನಿಂತು ಪ್ರಾಣಾರ್ಪಣೆ ಮಾಡುವ ಸೈನಿಕರು ಒಂದೆಡೆ ಇದ್ದಾರೆ. ದೇಶದ ಒಳಗಡೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕೆಂಬ ದೃಷ್ಟಿಯಿಂದ ನಮ್ಮನ್ನು ಸಂರಕ್ಷಣೆ ಮಾಡುವ ಪೊಲೀಸ್ ವ್ಯವಸ್ಥೆ ಮತ್ತೊಂಡೆ ಕರ್ತವ್ಯ ನಿರ್ವಹಿಸುತ್ತಿದೆ. ಇವರನ್ನು ಹೊರತು ಪಡಿಸಿ ದೇಶದಲ್ಲಿ ಮನುಷ್ಯನನ್ನು ಒಳಗೊಂಡAತೆ ಎಲ್ಲಾ ಜೀವ ಸಂಕುಲಗಳನ್ನು ವಿಶ್ವಾಸ ಮತ್ತು ಶಾಂತಿಯಿAದ ತಮ್ಮ ಬದುಕನ್ನು ನಡೆಸಿಕೊಂಡಿರಬೇಕೆAಬ ತ್ಯಾಗ, ಬಲಿದಾನವನ್ನು ಮಾಡುವಂಥವರು ಕೇವಲ ಅರಣ್ಯ ಇಲಾಖೆಯವರು ಮಾತ್ರ ಎಂದರು.

ಅರಣ್ಯ ಸಂರಕ್ಷಣಾಧಿಕಾರಿ ಯಶ್‌ಪಾಲ್ ಕ್ಷೀರ್‌ಸಾಗರ್ ಮಾತನಾಡಿ, ರಾಜ್ಯದಲ್ಲಿರುವ ೨೪ ಇಲಾಖೆಗಳಲ್ಲಿ ೨೩ ಇಲಾಖೆಗಳು ಈ ಪೀಳಿಗೆಗೆ ಕೆಲಸ ಮಾಡುತ್ತಿವೆ. ಆದರೆ ಮುಂದಿನ ಪೀಳಿಗೆಗೆ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಅರಣ್ಯ ಇಲಾಖೆ ಮಾತ್ರ ಎಂಬುದು ಹೆಮ್ಮೆ . ಅರಣ್ಯ ಉಳಿವಿಗಾಗಿ ಹಗಲು ರಾತ್ರಿ ಎನ್ನದೆ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಬಲಿದಾನವಾದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ. ಹುತಾತ್ಮರಾದವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ, ಹುತಾತ್ಮರ ಸಂಖ್ಯೆ ಮುಂದೆ ಹೆಚ್ಚದಂತಾಗಲಿ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಾಗಿರುವ ಬಗ್ಗೆ ದೇಶಕ್ಕೆ ತಿಳಿದಿದೆ. ಉತ್ತರಾಖಂಡ್, ಜಮ್ಮುವಿನ ಗುಡ್ಡಗಾಡು ಪ್ರದೇಶದಲ್ಲಾದ ಪ್ರವಾಹಗಳಾಗಳು, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಾದ ಭೂ ಕುಸಿತಕ್ಕೆ ಪರಿಸರದ ಮೇಲಾಗುತ್ತಿರುವ ಹಾನಿಯೇ ಕಾರಣ. ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜನರಲ್ಲಿ ಬಹಳಷ್ಟು ಅರಿವು ಮೂಡಿಸಿದ್ದಾರೆ. ಪರಿಸರ ಉಳಿವಿಗಾಗಿ ಬಿಷ್ಣೋಯಿ ಸಮಾಜದವರು ಹೋರಾಟ ಮಾಡಿ ಬಹಳಷ್ಟು ಮಂದಿ ಪ್ರಾಣತ್ಯಾಗಮಾಡಿದ್ದಾರೆ ಅವರ ಕೊಡುಗೆ ದೊಡ್ಡದಿದೆ ಎಂದರು.

ಕರ್ತವ್ಯದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥ ಪುಷ್ಪಗುಚ್ಚ ಸಮರ್ಪಿಸಲಾಯಿತು. ಉಪ ವಲಯಾರಣ್ಯಾಧಿಕಾರಿ ಎಂ.ಪಿ.ಸAತೋಷ್‌ಕುಮಾರ್ ನೇತೃತ್ವದಲ್ಲಿ ಫರೇಡ್ ನಡೆಸಿ ಪೊಲೀಸ್ ತಂಡದವರಿAದ ಮೂರು ಸುತ್ತು ಕುಶಾಲತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಡಿಸಿಎಫ್ ರಮೇಶ್ ಬಾಬು ಹುತಾತ್ಮರ ಹೆಸರುಗಳನ್ನು ಸ್ಮರಿಸಿದರು.

ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಪುಲ್ಕಿತ್ ಮೀಣಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಸಿ.ಆನಂದ್, ಎನ್.ರಮೇಶ್ ಬಾಬು, ಕೆ.ಟಿ.ಬೋರಯ್ಯ , ಆಕರ್ಷ್, ಕೆ.ಎಸ್.ಮೋಹನ್, ವಲಯ ಅರಣ್ಯಾಧಿಕಾರಿ ಎನ್.ವಿ.ತನೂಜ್ ಕುಮಾರ್ ಇದ್ದರು.