ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಜಿಲ್ಲಾಽಕಾರಿ ಜಾನಕಿ ಕೆ.ಎಂ. ಜಾಗೃತಿ ಪತ್ರ ಬಿಡುಗಡೆಗೊಳಿಸಿದರು. 
ಜಿಲ್ಲೆ

ವಸ್ತುಗಳ ಖರೀದಿಯಲ್ಲಿ ಜಾಗೃತಿ ಅಗತ್ಯ

ಬಾಗಲಕೋಟೆ: ವಸ್ತುಗಳ ಖರೀದಿಯಲ್ಲಿ ಜಾಗೃತಿ ವಹಿಸಿದಾಗ ಮಾತ್ರ ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ವಾರ್ತಾ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೋಡಲು ಒಳ್ಳೆಯ ಗುಣಮಟ್ಟದ ವಸ್ತುವಿನ ಹಾಗೆ ಕಂಡರು ಪರಿಶೀಲಿಸಿದ ಮೇಲೆಯೇ ಖರೀದಿಗೆ ಮುಂದಾಗಬೇಕು. ಗ್ರಾಹಕರಿಲ್ಲದೇ ವರ್ತಕರು ವ್ಯವಹಾರ ಮಾಡಲು ಸಾಧ್ಯವಿಲ್ಲ. ಆದರೆ ವರ್ತಕರು ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಿಗೆ ಅನ್ಯಾಯ ಮಾಡುತ್ತಿದ್ದು, ವ್ಯವಹಿಸುವಾಗ ಎಚ್ಚರಿಕೆಯಿಂದ ಇರಬೇಕು. ನಾವು ಕೊಡುವ ಮೌಲ್ಯಕ್ಕೆ ತಕ್ಕ ವಸ್ತು ಆಗಿರಬೇಕು. ಬಣ್ಣ, ರುಚಿಗೆ ಮರುಳಾಗದೇ ಗುಣಮಟ್ಟದ ವಸ್ತು ಖರೀದಿಗೆ ಮುಂದಾಗಬೇಕು. ಮೋಸ ಹೋದಲ್ಲಿ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಬೇಕು. ಈ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿದಲ್ಲಿ ಮೋಸ ಹೋಗುವುದನ್ನು ತಪ್ಪಿಸಲು ಸಾಧ್ಯವಿದೆ ಎಂದು ಹೇಳಿದರು.

ಜಿ.ಪಂ ಸಿಇಒ ಶಶೀಧರ ಕುರೇರ ಮಾತನಾಡಿ, ಗ್ರಾಹಕರು ಯಾವುದೇ ಒಂದು ವಸ್ತು ಖರೀದಿಸುವ ಮುನ್ನ ಗುಣಮಟ್ಟ ಪರಿಶೀಲಿಸುವದರ ಜೊತೆಗೆ ಖರೀದಿಸಿದಕ್ಕೆ ರಸೀದಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಮೋಸ ಹೋದಲ್ಲಿ ದೂರು ಕೊಡಲು ದಾಖಲೆಗಳು ಮುಖ್ಯವಾಗಿರುತ್ತವೆ. ಈ ನಿಟ್ಟಿನಲ್ಲಿ ಗ್ರಾಹಕರಿಗೆ ಇರುವ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು. ಆನ್‌ವ್ಯವಸ್ಥೆಯಲ್ಲಿ ಜನ ಸಾಕಷ್ಟು ಮೋಸ ಹೋಗುತ್ತಿದ್ದಾರೆ. ನೀವು ಎಲ್ಲಿಯವರೆಗೆ ಜಾಗೃತರಾಗುವದಿಲ್ಲವೋ ಅಲ್ಲಿಯ ವರೆಗೆ ಮೋಸ ಮಾಡುತ್ತಾ ಬರುತ್ತಾರೆ. ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲು ತಿಳಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ ಮಾತನಾಡಿ, ೧೯೮೬ ರಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆ ಜಾರಿಗೆ ತಂದಾಗ ಆನ್‌ಲೈನ್ ಮಾರುಕಟ್ಟೆ ಇರಲಿಲ್ಲ. ಆಗ ನೇರ ಮಾರುಕಟ್ಟೆ ಇತ್ತು. ಇತ್ತೀಚಿನ ವರ್ಷಗಳಲ್ಲಿ ಆನ್‌ಲೈನ್ ಮಾರುಕಟ್ಟೆ ಬಂದಿರುವದರಿAದ ಕಾಯ್ದೆಯ ನೂನ್ಯತೆಯನ್ನು ಸರಿಪಡಿಸಿ ೨೦೧೯ರಲ್ಲಿ ಗ್ರಾಹರಕ ಸಂರಕ್ಷಣಾ ಕಾಯ್ದೆ ಜಾರಿಗೆ ತರಲಾಗಿದೆ. ಗ್ರಾಹಕರ ಮೋಸ ಹೋದಲ್ಲಿ ಖುದ್ದಾಗಿ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿದರು. ನ್ಯಾಯವಾದಿ ಜೆ.ಎನ್.ಕುಲಕರ್ಣಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸಿ.ಎಚ್.ಸಮಿಉನ್ನಿಸ್ ಅಬ್ರಾರ್, ಡಿಡಿಪಿಐ ವಿವೇಕಾನಂದ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಽಕಾರಿಗಳು, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ಹಾಗೂ ಇಲಾಖೆಯ ಆಹಾರ ಇಲಾಖೆಯ ಲೆಕ್ಕಾಽಕಾರಿ ಆರ್.ಎಸ್.ಚೌದರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಸ್ವಾಗತಿಸಿದರು