ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಜಿಲ್ಲಾಽಕಾರಿ ಜಾನಕಿ ಕೆ.ಎಂ ಉದ್ಘಾಟಿಸಿ ಅವರು ಮಾತನಾಡಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಕಮಲಕಿಶೋರ ಜೋಶಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಪೂಜಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಇತರರು ಇದ್ದರು 
ಜಿಲ್ಲೆ

ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಿ

ಬಾಗಲಕೋಟೆ: ವಸ್ತುಗಳನ್ನು ಖರೀದಿಸುವಾಗ ಅವುಗಳ ಗುಣಮಟ್ಟ, ಪ್ರಮಾಣ, ಯೋಗ್ಯ ಬೆಲೆ ಇವುಗಳನ್ನು ಕೂಲಂಕುಷವಾಗಿ ಪರಿಶೀಲನೆ ಬಳಿಕವೇ ಖರೀದಿಸಲು ಮುಂದಾಗಬೇಕು ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ ಹೇಳಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ, ಕಾನೂನು ಮಾಪನ ಶಾಸ್ತ್ರ, ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ವಾರ್ತಾ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರ ಹಕ್ಕುಗಳ ಬಗ್ಗೆ ಮಹತ್ವವನ್ನು ಸಾರುವ ದಿನ ಇದಾಗಿದ್ದು, ಈ ವರ್ಷ ಗ್ರಾಹಕರಿಗೋಸ್ಕರ ಗುಣಮಟ್ಟದ ಹಾಗೂ ಜವಾಬ್ದಾರಿಯುತ ಕೃತಕ ಬುದ್ದಿಮತ್ತೆ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ನಾವು ಕೊಟ್ಟ ಹಣಕ್ಕೆ ವಸ್ತು ಇದೆಯೇ ಎಂಬುದನ್ನು ಪರಿಶೀಲಿಸಬೇಕು. ವ್ಯವಹಾರ, ಸೇವೆಯಲ್ಲಿ ಅನ್ಯಾಯವಾದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ. ಶಾಲಾ-ಕಾಲೇಜುಗಳಲ್ಲಿ ವಸ್ತುಗಳ ಗುಣಮಟ್ಟ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ವ್ಯವಹಾರ ಹೆಚ್ಚಾಗಿದ್ದು, ಗ್ರಾಹಕ ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯವಾಗಿದೆ. ಡಿಜಿಟಲ್ ವ್ಯವಹಾರದಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ, ವಿವಿಧ ಕೆÂ್ಷÃತ್ರಗಳಲ್ಲಿ ಸೇವೆ ಪಡೆಯುವಾಗ ಶೋಷಣೆ, ಅನ್ಯಾಯವಾದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಡಿ.ವೈ.ಬಸಾಪುರ ಮಾತನಾಡಿ, ವ್ಯಾಪಾರ ಮತ್ತು ಗ್ರಾಹಕರ ನಡುವಿನ ಮಧ್ಯಸ್ಥಗಾರಿಕೆಯಾಗಿ ಗ್ರಾಹಕರ ವೇದಿಕೆ ಕೆಲಸ ಮಾಡುತ್ತಿದೆ. ವ್ಯಾಪಾರಸ್ಥ ಗ್ರಾಹಕರಿಗೆ ಮೋಸ ಮಾಡಿದಲ್ಲಿ ಅವರ ವಿರುದ್ದ ದೂರು ನೀಡಲು ಮುಂದಾಗಬೇಕು. ಅಂದಾಗ ಮಾತ್ರ ಮೋಸ ಮಾಡುವದನ್ನು ತಡೆಯಬಹುದಾಗಿದೆ. ಗ್ರಾಹಕರು ಆಯೋಗದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಿರಿಯ ನ್ಯಾಯವಾದಿ ಪಿ.ಆರ್.ಬಡಿಗೇರ ಮತ್ತು ಪೊಲೀಸ್ ಇನ್ಸಪೆಕ್ಟರ ಎಂ.ನಾಗರಡ್ಡಿ ಮಾತನಾಡಿ, ಹುಟ್ಟಿನ ಪ್ರತಿಯೊಬ್ಬ ವ್ಯಕ್ತಿ ಗ್ರಾಹಕರಾಗಿದ್ದು, ಇಂದಿನ ವೈಜ್ಞಾನಿಕ ಯುಗದಲ್ಲಿ ಆನ್‌ಲೈನ್ ವ್ಯವಹಾರದಲ್ಲಿ ಮೋಸಹೋಗುತ್ತಿದ್ದು, ಎಚ್ಚರಿಕೆಯಿಂದ ವ್ಯವಹಾರ ಮಾಡಲು ಜಾಗೃತಿ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಕಮಲಕಿಶೋರ ಜೋಶಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಪೂಜಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಆಹಾರ ಗುಣಮಟ್ಟದ ಇಲಾಖೆ ಅಽಕಾರಿ ಡಾ.ವಿಜಯ ಕಂಠಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವಿವಿಧ ಇಲಾಖೆ ಸಂಸ್ಥೆಗಳಿಂದ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು.